ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ : ಕಲ್ಲಡ್ಕ ಭಟ್‌ಗೆ ಜಾಮೀನು

ಬೆಂಗಳೂರು: ಡಿ.29: ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

ತಮ್ಮ ವಿರುದ್ಧ ಎಫ್ಐಆರ್ ರದ್ದು ಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿದೆ. ಸರ್ಕಾರದ ಪರ ಎಸ್ಪಿಪಿಗೆ ನ್ಯಾಯಮೂರ್ತಿ ರಾಜೇಶ್ ರೈ ಅವರು ಸೂಚಿಸಿದ್ದಾರೆ.
ಇದರೊಂದಿಗೆ ಕಲ್ಲಡ್ಕ ಪ್ರಭಾಕರ್ ಭಟ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಇದನ್ನು ರದ್ದುಗೊಳಿಸುವಂತೆ ಸೂಚಿಸಬೇಕೆಂದು ಹೈಕೋರ್ಟ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿ ರಾಜೇಶ್ ರೈ, ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚಿಸಿದ್ದಾರೆ.

News Editor

Learn More →

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?