ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತ್ಯು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ.

ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ.

ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದು, ಆತನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.

ಬೈಕ್ ಸವಾರ ತನ್ನ ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.

ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಘಟನೆ ಬಳಿಕ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

News Editor

Learn More →

Leave a Reply

Your email address will not be published. Required fields are marked *