ಲಾರಿ ಹರಿದು ವ್ಯಕ್ತಿ ಮೃತ್ಯು

ಬಂಟ್ವಾಳ ನಗರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸಹ ಸವಾರನ ಮೇಲೆ ಲಾರಿ ಹರಿದು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ.

ಮೃತ ಯುವಕನನ್ನು ಬೆಂಗ್ರೆ ನಿವಾಸಿ ರಮೀಝ್ (20) ಎಂದು ಗುರುತಿಸಲಾಗಿದೆ. ಸ್ನೇಹಿತರಿಬ್ಬರು ಅಜಿಲಮೊಗರು ಉರೂಸ್ ಕಾರ್ಯಕ್ರಮಕ್ಕೆ ಬಂದವರು ಎಂದು ಹೇಳಲಾಗುತ್ತಿದೆ.

ಲಾರಿ ಸಹಿತ ಪರಾರಿಯಾಗಿದ್ದ ಚಾಲಕನನ್ನು ಬಳಿಕ ಪೋಲೀಸರು ಪತ್ತೆ ಮಾಡಿದ್ದಾರೆ. ಪ್ರಸ್ತುತ ಘಟನೆಯಿಂದಾಗಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬಂಟ್ವಾಳ ಸಂಚಾರಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *