ಮಂಗಳೂರು: ಲಾರಿ ಢಿಕ್ಕಿ : ಸ್ಕೂಟರ್ ಸವಾರ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಲಾರಿ ಢಿಕ್ಕಿಯಾಗಿ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್‌ ಕ್ರಾಸ್‌ ಬಳಿ ನಡೆದಿದೆ.

ಸಾವನ್ನಪ್ಪಿದವರು ಯತೀಶ್‌(40) ಎಂದು ಗುರುತಿಸಲಾಗಿದೆ.

ಅವರು ಸ್ಕೂಟರ್‌ನಲ್ಲಿ ಅಪರಾಹ್ನ 3.10ರ ಸುಮಾರಿಗೆ ಕೂಳೂರಿನಿಂದ ಕೊಟ್ಟಾರಚೌಕಿ ಕಡೆಗೆ ಬರುತ್ತಿದ್ದಾಗ ಕೋಡಿಕಲ್‌ ಕ್ರಾಸ್‌ ಬಳಿ ಸ್ವಲ್ಪ ಮುಂದೆ ಕೂಳೂರು ಕಡೆಯಿಂದ ಕೊಟ್ಟಾರ ಚೌಕಿ ಕಡೆಗೆ ಗ್ಯಾಸ್‌ ಸಿಲಿಂಡರ್‌ ಸಾಗಿಸುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತು. ರಸ್ತೆಗೆ ಬಿದ್ದ ಅವರ ಮೇಲೆಯೇ ಲಾರಿಯ ಚಕ್ರ ಹಾದು ಹೋಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಗಳೂರು ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?