ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಗುಂಡು ಹಾರಿಸಿ ಬಂಧನ

ಮಂಗಳೂರು; ಮೋಸ್ಟ್ ವಾಟೆಂಡ್, ನಟೋರಿಯಸ್ ರೌಡಿ ಆಕಾಶಭವನ ಶರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.

ಶರಣ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆನಂತರ, ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಮಂಗಳವಾರ ಮಧ್ಯಾಹ್ನ ಆರೋಪಿ ಜಪ್ಪು ಕುದ್ದಾಡಿಯಲ್ಲಿದ್ದಾನೆಂದು ವಶಕ್ಕೆ ಪಡೆಯಲು ಮುಂದಾಗಿದ್ದರು ಎನ್ನುವ ಮಾಹಿತಿಗಳಿವೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ರಾಜಕೀಯ
ಅಕ್ರಮ-ಸಕ್ರಮ ಅರ್ಜಿ ವಿಚಾರದಲ್ಲಿ ಹಾಲಿ ಶಾಸಕರು ಜನತೆಗೆ ಸುಳ್ಳು ಸಂದೇಶ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಪರೂಪದ ಅಪ್ಪುಗೆ, ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​ಕ್ಲೂಸಿವ್ ದೃಶ್ಯ ಇಲ್ಲಿದೆ
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
“ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಜನರಿಗೂ ಗೊತ್ತಾಗಬೇಕು — ಕೆಲವೊಮ್ಮೆ ಸಾರ್ವಜನಿಕರಿಗೆ open ಇರಬಹುದಾದ ಸಭೆಗಳಿಗೆ ಅಧ್ಯಕ್ಷರ ಅನುಮತಿಯೊಂದಿಗೆ ವೀಕ್ಷಕರಾಗಿ ಹಾಜರಾಗುವ ಹಕ್ಕೂ ಜನರಿಗೆ ಇದೆ.”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಜನರ ತೆರಿಗೆ ಹಣದ ಸರ್ಕಾರಿ ವಾಹನಗಳು ರಾಜಕಾರಣಿಗಳ ಖಾಸಗಿ ಸವಾರಿ ಕೇಂದ್ರಗಳಾಗುತ್ತಿವೆಯೇ?