ಮಂಗಳೂರು – ಬೈಕಂಪಾಡಿ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ಮಂಗಳೂರು : ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್‌ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ.

ತಡರಾತ್ರಿ 1 ಗಂಟೆ ಸುಮಾರಿಗೆ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸಂಸ್ಥೆಯ ಸೆಕ್ಯೂರಿಟಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಕೂಡಲೇ ಪಾಂಡೇಶ್ವರ, ಕದ್ರಿ, ಮತ್ತು ಎಂಆರ್‌ಪಿಎಲ್ ನ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಶ್ವಿಯಾಗಿದ್ದಾರೆ.

ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದರಿಂದ ಸುಮಾರು ಮೂರು ಘಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಅಗ್ನಿ ದುರಂತಕ್ಕೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ. ಪಣಂಬೂರು ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *