ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ.

ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು ಗುರುತಿಸಲಾಗಿದೆ. ಮಂಗಳೂರು ಎ.ಜೆ. ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಯಾಗಿದ್ದ ಈತ ಕೆಲ ದಿನಗಳ ಹಿಂದೆ ಮಂಜೇಶ್ವರ ಪರಿಸರ ದಲ್ಲಿರುವ ಸಂಬಂಧಿಕರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸುತ್ತಿದ್ದ ಪೊಲೀಸರು ಬುಧವಾರ ಸಂಜೆ ಕೊಪ್ಪಳ ನದಿಯಲ್ಲಿ ಯುವಕನ ಮೃತದೇಹ ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ದೇಹದ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮಂಜೇಶ್ವರ ಠಾಣಾ ಪೊಲೀಸರು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿದು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದ ಮೃತ ದೇಹದ ಗುರುತನ್ನು ಕುಟುಂಬಸ್ಥರು ಪತ್ತೆ ಹಚ್ಚಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ರಾಜಕೀಯ
ಅಕ್ರಮ-ಸಕ್ರಮ ಅರ್ಜಿ ವಿಚಾರದಲ್ಲಿ ಹಾಲಿ ಶಾಸಕರು ಜನತೆಗೆ ಸುಳ್ಳು ಸಂದೇಶ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಪರೂಪದ ಅಪ್ಪುಗೆ, ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​ಕ್ಲೂಸಿವ್ ದೃಶ್ಯ ಇಲ್ಲಿದೆ
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
“ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಜನರಿಗೂ ಗೊತ್ತಾಗಬೇಕು — ಕೆಲವೊಮ್ಮೆ ಸಾರ್ವಜನಿಕರಿಗೆ open ಇರಬಹುದಾದ ಸಭೆಗಳಿಗೆ ಅಧ್ಯಕ್ಷರ ಅನುಮತಿಯೊಂದಿಗೆ ವೀಕ್ಷಕರಾಗಿ ಹಾಜರಾಗುವ ಹಕ್ಕೂ ಜನರಿಗೆ ಇದೆ.”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಜನರ ತೆರಿಗೆ ಹಣದ ಸರ್ಕಾರಿ ವಾಹನಗಳು ರಾಜಕಾರಣಿಗಳ ಖಾಸಗಿ ಸವಾರಿ ಕೇಂದ್ರಗಳಾಗುತ್ತಿವೆಯೇ?