ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ; ಡಿವೈಡರ್ ಗೆ ಎಸೆಯಲ್ಪಟ್ಟ ಪಾದಚಾರಿ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಬಳಿ ಶನಿವಾರ ತಡರಾತ್ರಿ ನಡೆದಿದೆ.

ಉಳ್ಳಾಲ, ಜ.21: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಬಳಿ ಶನಿವಾರ ತಡರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಾಡೂರು ನಿವಾಸಿ ಜನಾರ್ದನ ಆಚಾರ್ಯ (45) ಎಂದು ಗುರುತಿಸಲಾಗಿದೆ. ಮೂಲತಃ ಅಂಬ್ಲಮೊಗರು ನಿವಾಸಿ ಜನಾರ್ದನ್ ಅವರು ಈ ಹಿಂದೆ ತೊಕ್ಕೊಟ್ಟು ಕರಾವಳಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು ಇತ್ತೀಚಿಗೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮಾಡೂರಿನಲ್ಲಿ ಪತ್ನಿ, ಮಕ್ಕಳೊಂದಿಗೆ ವಾಸವಿದ್ದ ಜನಾರ್ದನ್ ಶನಿವಾರ ರಾತ್ರಿ ಅಂಬಿಕಾ ರೋಡಿನಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಡಿವೈಡರ್ ಗೆ ಎಸೆಯಲ್ಪಟ್ಟ ಜನಾರ್ದನ್ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಬೈಕ್ ಸವಾರ ಉಳ್ಳಾಲ ಒಂಬತ್ತುಕೆರೆ ನಿವಾಸಿ ಕಿರಣ್ ಎಂಬವರು ತಲಪಾಡಿ ಕಡೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕಿರಣ್  ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *