
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬೀಚ್ಗೆ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಬ್ಯಾಂಕ್ ಉದ್ಯೋಗಿಯೊಬ್ಬರು ಸಮುದ್ರದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್ನಲ್ಲಿ ಸಂಭವಿಸಿದೆ.
ನಾಪತ್ತೆಯಾದವರನ್ನು ಬೆಂಗಳೂರಿನ ಬ್ಯಾಂಕ್ ಉದ್ಯೋಗಿ ನಿತಿನ್ (35) ಎಂದು ಗುರುತಿಸಲಾಗಿದೆ. ರಜೆಯ ಹಿನ್ನೆಲೆಯಲ್ಲಿ ಜ. 26ರಂದು ಇಬ್ಬರು ಸ್ನೇಹಿತರೊಂದಿಗೆ ಉಡುಪಿಗೆ ಬಂದಿದ್ದು, ಶನಿವಾರ ಹೊರಡುವ ಹಿನ್ನೆಲೆಯಲ್ಲಿ ಡೆಲ್ಟಾ ಬೀಚ್ಗೆ ತೆರಳಿದ್ದರೆನ್ನಲಾಗಿದೆ.
ಅಲ್ಲಿ ಸಮುದ್ರದ ನೀರಿನಲ್ಲಿ ಆಡುತ್ತಿರುವಾಗ ನಿತಿನ್ ಅಲೆಗಳೊಂದಿಗೆ ಕೊಚ್ಚಿ ಕೊಂಡು ಹೋಗಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹುಡುಕಾಟ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


