
ಉಡುಪಿ: ಬ್ರಹ್ಮಾವರದಲ್ಲಿ ನಡೆದಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿ ಎಂದು ತಿಳಿಯಲಾಗಿದೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಇವರ ಕೊಲೆಯಾಗಿದ್ದು ಸದ್ರಿ ಪ್ರಕರಣದಲ್ಲಿ ಆರೋಪಿತರಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಇವರುಗಳನ್ನು ಈಗಾಗಲೆ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರುತ್ತಾರೆ.
ವಿಶಾಲ ಅವರ ಗಂಡ ರಾಮಕೃಷ್ಣ ಪ್ರಮುಖ ಆರೋಪಿತನಾಗಿದ್ದು ಈತನಿಗೂ ಹಾಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ನಿಗೂ ಪರಿಚಯ ಮಾಡಿಸಿ ವಿಶಾಲ ರವರ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿಯಾದ ಧರ್ಮೇಂದ್ರ ಕುಮಾರ್ ಸುಹಾನಿ ಈತನು ಪ್ರಕರಣ ದಾಖಲಾದ ವಿಚಾರ ತಿಳಿದು, 3 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದವನನ್ನು ಬ್ರಹ್ಮಾವರ ಠಾಣಾ ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ತಂಡವು ದಿನಾಂಕ: 02-02-2024 ರಂದು ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ 03-02-2024 ರಂದು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿರುತ್ತದೆ.


