
ಬೆಳ್ತಂಗಡಿ: ಖಾಸಗಿ ಬಸ್ಸಿನ ವೇಗದ ಅವಂತಾರದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರು ಎಳೆದುಕೊಂಡ ಹೋದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಸಮೀಪ ಫೆ.4 ರಂದು(ಇಂದು) ಸಂಜೆ ನಡೆದಿದೆ.
ಮೃತಪಟ್ಟ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಧರಣೇಂದ್ರ (24) ಎನ್ನಲಾಗಿದೆ. ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ವೇಗವಾಗಿ ಬರುತಿದ್ದ ಶ್ರೀ ದುರ್ಗಾ ಹೆಸರಿನ ಖಾಸಗಿ ಬಸ್ ಡಿಕ್ಕಿ ಹೊಡೆದು ನಂತರ ಸ್ವಲ್ಪ ದೂರ ಸ್ಕೂಟರ್ ಸಮೇತ ಬಸ್ ಎಳೆದುಕೊಂಡು ಹೋಗಿದೆ


