ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಎಂದ ಪತ್ನಿ, ಮನನೊಂದ ಪತಿ ಆತ್ಮಹತ್ಯೆಗೆ ಶರಣು.

ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಎಂದ ಪತ್ನಿ, ಮನನೊಂದ ಪತಿ ಆತ್ಮಹತ್ಯೆಗೆ ಶರಣು.

ಚಾಮರಾಜನಗರ : ರಿಯಲ್‌ ಸ್ಟಾರ್‌ ಉಪೇಂದ್ರ ನಟನೆಯ ಉಪೇಂದ್ರ ಸಿನಿಮಾದ ಹಾಡು ಇದೀಗ ಸಕ್ಕತ್ ವೈರಲ್ ಆಗಿದ್ದು ಕಳೆದ ಹಲವುದಿನಗಳಿಂದ ಎಲ್ಲಾರ ಬಾಯಲ್ಲಿ ಬರೋದು ಈ ಹಾಡು.. ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದ್ದು ಯುವಕರೆಲ್ಲ ರೀಲ್ಸ್ ನಲ್ಲೆ ಪ್ರಚಾರಗಿಟ್ಟಿಸಿಕೊಂಡಿದಂತೂ ನಿಜ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಮಹಿಳೆಯೋರ್ವಳು ಇದೇ ಹಾಡಿಗೆ ರೀಲ್ಸ್​ ಮಾಡಿದ್ದು ಇದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ,ಮೃತರನ್ನು ಕುಮಾರ್ (33) ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ ಎಂಬ ಸಾಂಗ್‌ಗೆ ರೀಲ್ಸ್‌ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಳು. ಈ ವಿಡಿಯೋ ವೈರಲ್ ಆಗ್ತಿದ್ದಂತೆ ಊರಲ್ಲಿ ಕುಮಾರ್‌ನನ್ನು ಕೆಲವರು ಕಾಲೆಳೆದು ಯಾರಪ್ಪಾ ಕರಿಮಣಿ ಮಾಲೀಕ ಎಂದು ಹೀಯಾಳಿಸಿದ್ದಾರೆ,ಪತ್ನಿಯ ಈ ರೀಲ್ಸ್ ನೋಡಿ ಕುಮಾರ್​ನನ್ನು ಗೆಳೆಯರು ರೇಗಿಸಿದ್ದಾರೆ,ಈ ವಿಚಾರದ ಬಗ್ಗೆ ಕೋಪಗೊಂಡ ಕುಮಾರ್, ರೀಲ್ಸ್​ ಮಾಡಿರುವುದನ್ನು ಪ್ರಶ್ನಿಸಿ ರೂಪ ಜೊತೆ ಗಲಾಟೆ ಮಾಡಿದ್ದಾರೆ.​ಇದರಿಂದ ಮನನೊಂದು ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?