
ಮುಕ್ರಂಪಾಡಿ ಜಂಕ್ಷನ್ನಲ್ಲಿ ತಡರಾತ್ರಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ. 19ರಂದು ತಡ ರಾತ್ರಿ ನಡೆದಿದೆ.
ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ. ಪುತ್ತೂರು ನಗರ ಪೊಲೀಸ್ ಠಾಣೆಯ ಸಿಬಂದಿಗಳೊಂದಿಗೆ, ಮುಕ್ರಂಪಾಡಿ ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ಒಂದು ತಲವಾರು ಪತ್ತೆಯಾಗಿತ್ತು.
ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಬಂಟ್ವಾಳ ನಿವಾಸಿ ಕಿಶೋರ್, ಪುತ್ತೂರು ನಿವಾಸಿಗಳಾದ ಮನೋಜ್, ಆಶಿಕ್ ಮತ್ತು ಸನತ್ ಕುಮಾರ್ನನ್ನು ವಶಕ್ಕೆ ಪಡೆಯಲಾಗಿದೆ. ಫೆ. 20ರಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


