ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ.

ಮುಕ್ರಂಪಾಡಿ ಜಂಕ್ಷನ್‌ನಲ್ಲಿ ತಡರಾತ್ರಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ. 19ರಂದು ತಡ ರಾತ್ರಿ ನಡೆದಿದೆ.

ಪುತ್ತೂರು ನಗರ ಪೊಲೀಸ್‌ ನಿರೀಕ್ಷಕ ಸತೀಶ್‌ ಜಿ.ಜೆ. ಪುತ್ತೂರು ನಗರ ಪೊಲೀಸ್‌ ಠಾಣೆಯ ಸಿಬಂದಿಗಳೊಂದಿಗೆ, ಮುಕ್ರಂಪಾಡಿ ಜಂಕ್ಷನ್‌ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ಒಂದು ತಲವಾರು ಪತ್ತೆಯಾಗಿತ್ತು.

ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಬಂಟ್ವಾಳ ನಿವಾಸಿ ಕಿಶೋರ್‌, ಪುತ್ತೂರು ನಿವಾಸಿಗಳಾದ ಮನೋಜ್‌, ಆಶಿಕ್‌ ಮತ್ತು ಸನತ್‌ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ಫೆ. 20ರಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?