ಕಿರಾಣಿ ಅಂಗಡಿ ಪ್ರಾರಂಭಿಸಿದ್ದು ಮಧ್ಯ ಮಾರಾಟಕ್ಕೆ ಪರವಾನಿಗೆ ನೀಡುವಂತೆ ಮನವಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿರುವ ಬೆನ್ನಲ್ಲೇ ಇನ್ನೊಬ್ಬರು ನಾನು ಕಿರಾಣಿ ಅಂಗಡಿ ಪ್ರಾರಂಭಿಸಿದ್ದು ಮಧ್ಯ ಮಾರಾಟಕ್ಕೆ ಪರವಾನಿಗೆ ನೀಡುವಂತೆ ಮನವಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.

ಹಿರಿಯೂರು ತಾಲೂಕಿನ ಐಮಂಗಲ ಹೋಬಳಿ ಬುರುಜನರೊ ಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹೊಸ ನಾಯಕರಹಟ್ಟಿ ಗ್ರಾಮದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜ್ಯ ಗ್ರಾಮೀಣ ಅಭಿವೃದ್ಧಿ ಸಮಿತಿಯ ಹೆಚ್ ಹೆಚ್. ಸಿ ಚಂದ್ರಶೇಖರ್ ಚಿಲ್ಲರೆ ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಇವರು ಹಿರಿಯೂರು ಅಬಕಾರಿ ನಿರೀಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ತಮ್ಮ ಮನವಿ ಪತ್ರದಲ್ಲಿ ಹೊಸ ನಾಯಕರ ಹಟ್ಟಿ ವಾಸಿಯಾಗಿದ್ದು ನಾನು ನಮ್ಮ ಮನೆಯಲ್ಲಿ ಒಂದು ಚಿಲ್ಲರೆ ಅಂಗಡಿಯನ್ನು ತೆರೆಯುತ್ತಿದ್ದು ಈ ಚಿಲ್ಲರೆ ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಉತ್ಸುಕನಾಗಿದ್ದು ತಾವುಗಳು ದಯಮಾಡಿ ನನ್ನ ಚಿಲ್ಲರೆ ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಅನುಮತಿ ನೀಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ದಿನಾಂಕ 21-2-2024 ರಂದು ಹಿರಿಯೂರು ಅಬಕಾರಿ ಉಪನಿರೀಕ್ಷಕರ ಕಚೇರಿಗೆ ಮನವಿ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗ್ರಾಮೀಣ ಭಾಗದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡಲೆಂದೇ ಡಬ್ಬಾ ಅಂಗಡಿಗಳನ್ನು ಪ್ರಾರಂಭಿಸಿ ಕಿರಾಣಿ ಸಾಮಾನುಗಳ ಜೊತೆ ಮಾರಾಟ ಮಾಡುತ್ತಾರೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಮನವಿ ನೀಡಿರುವುದನ್ನು ಕಂಡಿದ್ದೇವೆ ಆದರೆ ಹೊಸ ನಾಯಕರು ಹಟ್ಟಿ ಚಂದ್ರಶೇಖರ್ ಎಂಬುವರು ಚಿಲ್ಲರೆ ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಅನುಮತಿ ಕೋರಿ ಅಬಕಾರಿ ಇಲಾಖೆಗೆ ಮನವಿ ನೀಡಿರುವುದು ವಿಶೇಷವಾಗಿದೆ ಈ ಬಗ್ಗೆ ಅಬಕಾರಿ ಇಲಾಖೆ ಪರವಾನಿಗೆ ನೀಡುತ್ತೋ ಇಲ್ಲವೋ ಕಾದು ನೋಡಬೇಕಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?