ಹೃದಯಾಘಾತದಿಂದ ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕೆ. ಹೊಯ್ಸಳ ನಿಧನ 

ಬೆಂಗಳೂರು, : ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಮೃತ ಆಟಗಾರ ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಹೊಯ್ಸಳ ಪ್ರತಿನಿಧಿಸುತ್ತಿದ್ದರು.

ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿತ್ತು. ಈ ವೇಳೆ ತಂಡದೊಂದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲೇ ಹೊಯ್ಸಳ ಅವರು ಮೃತಪಟ್ಟಿದ್ದಾರೆ.

ಮಧ್ಯಮ ಕ್ರಮಾಂಕದ ವೇಗಿಯಾಗಿರುವ ಹೊಯ್ಸಳ ಅಂಡರ್ -15 ವಿಭಾಗದಲ್ಲಿ ಕರ್ನಾಟಕ ತಂಡ ಪ್ರತಿನಿಧಿಸಿದ್ದರು.

News Editor

Learn More →

Leave a Reply

Your email address will not be published. Required fields are marked *