
ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ ಘಟನೆ ಸರಕಾರಿ ಕಾಲೇಜು ಕಡಬದಲ್ಲಿ ಬೆಳಕಿಗೆ ಬಂದಿದೆ.
ಕಡಬ ಸರಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಪಿಯುಸಿ ಓದುತ್ತಿರುವ ಅಲೀನಾ, ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಯಾಗಿದೆ. ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಪರೀಕ್ಷೆ ತಯಾರಿ ನಡೆಸುವ ವೇಳೆ ಘಟನೆ ಸಂಭವಿಸಿದೆ. ಆರೋಪಿ ಕೇರಳ ಮೂಲದ ಅಬೀನ್ ಎಂದು ಗುರುತಿಸಲಾಗಿದ್ದು, ಮಾಸ್ಕ್, ಹ್ಯಾಟ್ ಧರಿಸಿ ಬಂದಿದ್ದು ದಾಳಿ ಮಾಡಿದ್ದಾನೆ. ದಾಳಿಗೊಳಗಾದ ವಿದ್ಯಾರ್ಥಿಗಳಲ್ಲಿ ಮೂವರು ವಿದ್ಯಾರ್ಥಿಗಳಿಗೆ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಗೆ ಸಿದ್ಧತೆ ನಡೆಸಲಾಗಿದೆ. ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.


