ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ.

ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(20ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್(ಜೀತ್‌) ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಶ್ರೀಜಿಸ್‌ರವರು ತಂದೆ , ತಾಯಿ, ಸಹೋದರರಾದ ಸುನೀಶ್‌ ಹಾಗೂ ಸುಜಿಸ್‌ರವರನ್ನು ಅಗಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!