ಮಂಗಳೂರು: ಏರ್‌ಪೋರ್ಟ್‌ನಲ್ಲಿ 45 ಲಕ್ಷ ರೂ ಮೌಲ್ಯದ ಚಿನ್ನ ಸೀಜ್

ನಗರದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟ ಮಾಡುತ್ತಿದ್ದ 45 ಲಕ್ಷ ರೂ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ನಿವಾಸಿ ಮಾರ್ಚ್ 3ರಂದು ಅಬುಧಾಬಿಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 816 ನಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ್ದಾನೆ.

ಈತನ ಅನುಮಾನಾಸ್ಪದ ಚಲನವಲನವನ್ನು ಗಮನಿಸಿ, ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನ ಸೊಂಟದ ಪ್ರದೇಶದಲ್ಲಿ ಚಿನ್ನ ಅಡಗಿಸಿಟ್ಟದ್ದು ತಿಳಿದುಬಂದಿದೆ. ಈ ಪ್ರಯಾಣಿಕ ತನ್ನ ಗುದನಾಳದಲ್ಲಿ 3 ಅಂಡಾಕಾರದ ವಸ್ತುಗಳನ್ನು ಮರೆಮಾಡಿ ಸಾಗಿಸುತ್ತಿದ್ದ. ಇದರೊಳಗಿದ್ದ ಪೇಸ್ಟ್ ರೂಪದಲ್ಲಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತನಲ್ಲಿ 24 ಕ್ಯಾರೆಟ್ ಶುದ್ಧತೆಯ 729 ಗ್ರಾಂ ಚಿನ್ನ ದೊರೆತಿದ್ದು, ಇದರ ಮೌಲ್ಯ ರೂ 45,92,700 ಎಂದು ಅಂದಾಜಿಸಲಾಗಿದೆ. ಪ್ರಯಾಣಿಕನನ್ನು ವಶಕ್ಕೆ‌ ಪಡೆದುಕೊಂಡು ವಿಚಾರಣೆ ಮುಂದುವರಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!