43 ಅಭ್ಯರ್ಥಿಗಳ ಕಾಂಗ್ರೆಸ್​ ನ 2ನೇ ಪಟ್ಟಿ ಪ್ರಕಟ..!

ಮುಂಬರುವ ಲೋಕಸಭಾ ಚುನಾವಣೆಗೆ ನಾಲ್ಕು ರಾಜ್ಯಗಳ 43 ಅಭ್ಯರ್ಥಿಗಳ ಹೆಸರಿರುವ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕಾಂಗ್ರೆಸ್​ನ ಮುಂಚೂಣಿ ನಾಯಕರ ಮಕ್ಕಳ ಹೆಸರುಗಳು ಪ್ರಧಾನವಾಗಿ ಕಂಡು ಬಂದಿದೆ. ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಪುತ್ರ ಗೌರವ್ ಗೊಗೊಯ್, ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಮತ್ತು ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಸೇರಿದಂತೆ ಕಾಂಗ್ರೆಸ್​ನ ಹೊಸ ಪೀಳಿಗೆಯ ನಾಯಕರು ಕಾಣಿಸಿಕೊಂಡಿದ್ದಾರೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈ ಹಂತದಲ್ಲಿ ಅದನ್ನು ಬಿಡುಗಡೆ ಮಾಡಿಲ್ಲ
ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ರಾಜ್ಯದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿತ್ತು. ಅದೀಗ ದೆಹಲಿ ತಲುಪಿದೆ. ಹೀಗಾಗಿ ಕರ್ನಾಟಕದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮೂರನೇ ಹಂತದಲ್ಲಿ ಬಿಡುಗಡೆಗೊಳ್ಳಬಹುದು. ರಾಜಸ್ಥಾನದ ಜರೋಲ್​ನಿಂದ ಸ್ಪರ್ಧಿಸಲಿರುವ ವೈಭವ್ ಗೆಹ್ಲೋಟ್ 2019 ರಲ್ಲಿ ಜೋಧ್​ಪುಟ್​ ಕ್ಷೇತ್ರದಿಂದ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಸೋತಿದ್ದರು. ಇದಲ್ಲದೆ ರಾಜ್ಯದ ಮಾಜಿ ಪೊಲೀಸ್ ಮುಖ್ಯಸ್ಥ ಹರೀಶ್ ಮೀನಾ ಅವರು ಟೋಂಕ್-ಸವಾಯಿ ಮಾಧೋಪುರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿಯಿಂದ ಪಕ್ಷಾಂತರಗೊಂಡ ರಾಹುಲ್ ಕಸ್ವಾ ಚುರುವಿನಿಂದ ಮತ್ತು ಬ್ರಿಜೇಂದ್ರ ಓಲಾ ಜುಂಜುನುದಿಂದ ಕಣಕ್ಕೆ ಇಳಿಯುತ್ತಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!