ಆಸ್ತಿ ನೋಂದಣಿಗೂ ಆಧಾರ್ ಜೋಡಣೆ; ಕಂದಾಯ ಸಚಿವ ಕೃಷ್ಣ ಬೈರೇಗೌಡ

ನಕಲಿ ದಾಖಲೆಗಳನ್ನು ಸೃಷ್ಟಿಸಿ ಇತರರ ಆಸ್ತಿಯನ್ನು ಕಬಳಿಕೆ ಮಾಡುವ ಪ್ರಕರಣಗಳನ್ನು ತಡೆಯಲು ಆಸ್ತಿಗಳ ನೋಂದಣಿಗೆ ಆಧಾರ್ ದೃಢೀಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ನನ್ನ ಆಸ್ತಿ ಎಂಬ ಯೋಜನೆಯನ್ನ ನನ್ನ ಭೂಮಿ, ನನ್ನ ಗುರುತು ಎಂಬ ಶೀರ್ಷಿಕೆಯಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಆಸ್ತಿ ನೋಂದಣಿ ವೇಳೆ ಆಧಾರ್ ಪಡೆಯುವ ಸೇವೆ ಆರಂಭ ಮಾಡುತ್ತೇವೆ ಎಂದರು.

ಕಡ್ಡಾಯ ಮಾಡುವುದಕ್ಕೆ ಆಗುವುದಿಲ್ಲ, ಆದರೆ ನೋಂದಣಿ ಮಾಡಬೇಕಾಗುತ್ತದೆ. ನೋಂದಣಿ ಸಮಯದಲ್ಲೂ ಆಧಾರ್ ನಂಬರ್ ಕೇಳುತ್ತೇವೆ. ಆಧಾರ್ ಜೋಡಣೆ ಮಾಡುವುದರಿಂದ ನಕಲು ತಡೆಯಬಹುದು. ಸುಪ್ರೀಂ ಕೋರ್ಟ್ ಪ್ರಕಾರ ಕಡ್ಡಾಯ ಮಾಡಲು‌ ಆಗುವುದಿಲ್ಲ. ಜಾಗರೂಕತೆಯಿಂದ ರಿಜಿಸ್ಟರ್ ಮಾಡಲು ಅನುಕೂಲ‌ ಆಗಲಿದೆ ಎಂದರು.
ಖಾತೆ ಮಾಡುವಾಗಲೂ ಆಧಾರ್ ಕಾರ್ಡ್​ ಅಳವಡಿಸಿಕೊಳ್ಳುತ್ತೇವೆ. ಮಹಾನಗರಗಲ್ಲಿ ಕೆಲಸಕ್ಕೆ ಹೋಗುವವರು ಇದ್ದಾರೆ. ನೋಂದಣಿ ಮಾಡಿಕೊಳ್ಳಲು ಹಲವರಿಗೆ ಕಷ್ಟ ಆಗುತ್ತದೆ. ಜನರ ಅನುಕೂಲಕ್ಕಾಗಿಯೇ ಮತ್ತೊಷ್ಟು ಜನರ ಆಡಳಿತ ನೀಡಲಿದ್ದೇವೆ ಎಂದರು.
ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ರಜಾದಿನ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ವಿಧಾನಸೌಧದಲ್ಲಿ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಭಾನುವಾರ ಒಂದೊಂದು ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಮಾಡಲಾಗುವುದು. ಸದ್ಯ ಕಾರ್ಪೊರೇಷನ್‌ ಇರುವ ಜಿಲ್ಲೆಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್‌ ಇದೆ. ಏಪ್ರಿಲ್ ನಂತರ ಮಹಾನಗರಗಳ ವ್ಯಾಪ್ತಿಯಲ್ಲೂ ಯೋಜನೆ ಜಾರಿ ಮಾಡುತ್ತೇವೆ. ಭಾನುವಾರ ಕೆಲಸ ಮಾಡಿದವರಿಗೆ ಮಂಗಳವಾರ ರಜೆ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!