ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ

ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸೇರ್ಪಡೆಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಂದ ಧ್ವಜವನ್ನು ಸ್ವೀಕರಿಸಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಇದೇ ವೇಳೆ ಬೈಂದೂರಿನ ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ ಹಾಗೂ ಮೂಡಿಗೆರೆಯ ಮಾಜಿ ಶಾಸಕ ಎಮ್ ಪಿ ಕುಮಾರಸ್ವಾಮಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಸೇರ್ಪಡೆ ಕಾರ್ಯಕ್ರಮದಲ್ಲಿ ಹಿರಿಯ ಸಚಿವರಾದ ಡಾಜಿ ಪರಮೇಶ್ವರ, ಕೆ ಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್ ಸಹಿತ ಉಡುಪಿ ಮತ್ತು ಚಿಕ್ಕಮಗಳೂರಿನ ಹಲವು ನಾಯಕರು ಪಾಲ್ಗೊಂಡಿದ್ದರು

News Editor

Learn More →

Leave a Reply

Your email address will not be published. Required fields are marked *