ಕಾರ್ಕಳ:ಅಕ್ರಮ ಮರಳು ಸಾಗಾಟ

ಕಾರ್ಕಳ:ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ವಾಹನವನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಅಡ್ಡೂರಿನ ಅಬ್ಬುಲ್ ಸತ್ತಾರ್ ಹಾಗೂ ಕಾರ್ಕಳದ ಪುಲ್ಕೇರಿ ರಾಜೇಶ ಎಂಬುವವರು ಮಂಗಳೂರಿನಿಂದ ಅಕ್ರಮವಾಗಿ ಮರಳನ್ನು ಪುಲ್ಕೇರಿ ಜಂಕ್ಷನ್ ಕಡೆಯಿಂದ ಬಂಗ್ಲೆಗುಡ್ಡೆ ಜಂಕ್ಷನ್ ಕಡೆಗೆ ಸಾಗಾಟ ಮಾಡುತ್ತಿದ್ದಾಗ ಕಾಬೆಟ್ಟು ಶ್ರೀ ವೇಣುಗೋಪಾಲ ದೇವಸ್ಥಾನದ ಜಂಕ್ಷನ್ ಬಳಿ ಕಾರ್ಕಳ ನಗರ ಠಾಣಾ ಪಿಎಸ್‌ಐ ಧನಂಜಯ ಬಿ ಸಿ ರವರು ಸಿಬ್ಬಂಧಿಯವರೊಂದಿಗೆ ಪತ್ತೆ ಹಚ್ಚಿ3 ಯುನಿಟ್ ಮರಳು ಹಾಗೂ ಟಿಪ್ಪರ್ ಲಾರಿಯನ್ನು ವಶ ಪಡಿಸಿಕೊಂಡಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *