
ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆಯಲು ಅರ್ಹರಾದವರು ಅರ್ಜಿ ಸಲ್ಲಿಸಲು ವಿದೇಶಾಂಗ ಸಚಿವಾಲಯ ಮೊಬೈಲ್ ಆಪ್ ಒಂದನ್ನು ಬಿಡುಗಡೆ ಮಾಡಿದೆ.
ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದ್ದು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳ ಬಹುದು. ಸಿಎಎ 2019 ರ ಅಡಿಯಲ್ಲಿ ಪೌರತ್ವ ಪಡೆಯಲು ಅರ್ಜಿಗಳನ್ನು ಸಲ್ಲಿಸಲು CAA -2019 ಈ ಮೊಬೈಲ್ ಆಪ್ ಕಾರ್ಯ ನಿರ್ವಹಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ.
ಇನ್ನು ಈ ಹಿಂದೆ ವಿದೇಶಾಂಗ ಸಚಿವಾಲಯ ಅರ್ಜಿ ಸಲ್ಲಿಸಲು ವೆಬ್ ಪೋರ್ಟಲ್ ಅನ್ನು ಆರಂಭ ಮಾಡಿತ್ತು ಸಿಎಎ ಅಡಿಯಲ್ಲಿ ಯಾವುದೇ ದಾಖಲೆ ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಪೂರ್ವದಲ್ಲಿ ಭಾರತ ಪ್ರವೇಶಿಸಿದ ಮುಸ್ಲಿಮರಿಗೆ ಭಾರತದ ಪೌರತ್ವವನ್ನು ನೀಡಲಾಗುತ್ತದೆ.


