
ಪುತ್ತೂರು ಶಾಸಕರ ಬೆಂಬಲಿಗರು ಅಕ್ರಮವಾಗಿ ಮನೆ ಅಂಗಳಕ್ಕೆ ಪ್ರವೇಶಿಸಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ ಮನೆ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿ ಪುಂಡಾಟಿಗೆ ಮೆರೆದ ಆರೋಪಿಗಳನ್ನು ದೇಶದಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಆರೋಪಿಗಳನ್ನು ಬಂಧನ ಮಾಡಿ ಯಾವ ಆದರದ ಮೇಲೆ ಬಿಡುಗಡೆಗೊಳಿಸಿದ್ದೀರಿ ಎಂದು ಪುತ್ತೂರು ನಗರಠಾಣಾ ಇನ್ಸ್ಪೆಕ್ಟರ್ ರಿಗೆ ಕರೆ ಮಾಡಿ ಮಾಜಿ ಶಾಸಕ ಸಂಜೀವ ಮಠಂದೂರು ಪ್ರಶ್ನಿಸಿದರು, ಹಾಗೂ ಜಯನಂದ ಬಂಗೇರ ರವರ ಮನೆಯವರಿಗೆ ಧೈರ್ಯ ತುಂಬಿದರು
ಈ ಸಂದರ್ಭದಲ್ಲಿ ಸ್ಥಳೀಯ ನಗರ ಸಭಾ ಸದಸ್ಯರಾದ ಸುಂದರ ಪೂಜಾರಿ ಬಡಾವು, ಬಿಜೆಪಿ ಪುತ್ತೂರು ನಗರ ಮಂಡಲ ಕಾರ್ಯದರ್ಶಿ ಅಶೋಕ್ ಹಾರಡಿ, ಬಿಜೆಪಿ ಮಾಜಿ ಹಿಂದುಳಿದ ವರ್ಗಗಳ ಸದಸ್ಯ ಪುರುಷೋತ್ತಮ ಬಂಗೇರ,ಮತ್ತು ಕಾರ್ಯಕರ್ತರು ಜೊತೆಗಿದ್ದರು…


