
ಬಿಟ್ ಕಾಯಿನ್ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ.
ಈ ಬಗ್ಗೆ ಪೊಲೀಸರು ಪ್ರಕಟಣೆ, ಹೊರಡಿಸಿದ್ದು, ಬಿಟ್ ಕಾಯಿನ್ ಕೇಸ್ ನ ಡಿವೈಎಸ್ಪಿ ಶ್ರೀಧರ್ ಪೂಜಾರ್ ಐದನೇ ಆರೋಪಿಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ನೀಡಿದರೆ ಅಥವಾ ಹಿಡಿದು ಕೊಟ್ಟವರಿಗೆ ಬಹುಮಾನ ಮತ್ತು ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು. ಡಿವೈಎಸ್ಪಿ ಶ್ರೀಧರ್ ಪೂಜಾರ್ ಬಗ್ಗೆ ಮಾಹಿತಿ ಇದ್ದರೆ ಸಿಐಡಿ ಫೈನಾನ್ಸಿಯಲ್ ಇಂಟೆ ಲಿಜೆನ್ಸ್ ಡಿವೈಎಸ್ಪಿ ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


