
ಬೆಂಜನ ಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ಸಿ. ಎಸ್. ಇ ವಿಭಾಗದ ಶ್ರಾವ್ಯ ವಿ .ಶೆಟ್ಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯ 76 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ತನ್ಮೂಲಕ ಇವರು ಅರುಣಾಚಲ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಂದೀಪ್ ರಾಜ್ ಮಾಡೂರು ಇವರಿಂದ ತರಬೇತಿ ಪಡೆಯುತ್ತಿದ್ದು ತಲಪಾಡಿ ನಾರ್ಲ ಪಡಿ ನಿವಾಸಿ ವಿಠಲಶೆಟ್ಟಿ ಸುಶೀಲಾ ದಂಪತಿಯ ಪುತ್ರಿ.


