ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

ವಿಟ್ಲ: ದಕ್ಷಿಣ ಕನ್ನಡ ಲೋಕಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ,
ಪ್ರಾರ್ಥಿಸಿದರು.


ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ, ಅರುಣ್ ವಿಟ್ಲ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ವಿಟ್ಲ ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರೊಂದಿಗೆ
ಸಮಲೋಚನೆ ನಡೆಸಿದರು.

News Editor

Learn More →

Leave a Reply

Your email address will not be published. Required fields are marked *