ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ.

ಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ(BJP) ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಹಿಮಾಚಲ ಪ್ರದೇಶದ (Himachal Pradesh) ಆರು ಕಾಂಗ್ರೆಸ್ (Congress) ಬಂಡಾಯ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸದನದಲ್ಲಿ ಉಪಸ್ಥಿತರಿರುವ ವಿಪ್ ಅನ್ನು ಧಿಕ್ಕರಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿದ್ದು, ಕಟ್ ಮೋಷನ್ ಮತ್ತು ಬಜೆಟ್ ಸಮಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದರು. ಹಿಮಾಚಲ ಪ್ರದೇಶದ ಆರು ಬಂಡಾಯ ಶಾಸಕರು- ಸುಧೀರ್ ಶರ್ಮಾ, ರವಿ ಠಾಕೂರ್, ಇಂದರ್ ದತ್ ಲಖನ್‌ಪಾಲ್, ದೇವೇಂದ್ರ ಭುಟ್ಟೋ, ರಾಜೇಂದ್ರ ರಾಣಾ ಮತ್ತು ಚೈತನ್ಯ ಶರ್ಮಾ ಅವರು ಹಿಮಾಚಲ ಪ್ರದೇಶ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಸರ್ಕಾರವನ್ನು ಬೆಂಬಲಿಸಿದ ಆರು ಬಂಡಾಯ ಕಾಂಗ್ರೆಸ್ ಶಾಸಕರು ಮತ್ತು ಮೂವರು ಸ್ವತಂತ್ರರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿದ ನಂತರ ಹಿಮಾಚಲದ ರಾಜಕೀಯ ಸನ್ನಿವೇಶವು ನಾಟಕೀಯ ತಿರುವು ಪಡೆದುಕೊಂಡಿತು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?