ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಮನಬಂದಂತೆ ಚಾಕು ಇರಿದ ಯುವಕ ;ಇಲ್ಲಿದೆ ವಿಡಿಯೋ

ಇಲ್ಲಿನ ಮುಖರ್ಜಿ ನಗರ ಪ್ರದೇಶದಲ್ಲಿ ಹಾಡಹಗಲೇ ಯುವತಿಯೊಬ್ಬಳ ಮೇಲೆ ಕಿಡಿಗೇಡಿ ಯುವಕ ಮನಬಂದಂತೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. 22 ವರ್ಷದ ಅಮನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ಯುವಕ, ಯುವತಿ ಮೇಲೆ ಚಾಕುವಿನಿಂದ ಹಲವು ಬಾರಿ ಇರಿದಿರುವುದನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದು. ದಾರಿಹೋಕರು ಮಧ್ಯಪ್ರವೇಶಿಸಿ ಆರೋಪಿಯನ್ನು ಹಿಡಿಯಲು ಯತ್ನಿಸಿದರು. ಇದರಿಂದ ಭಯಗೊಂಡ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.

News Editor

Learn More →

Leave a Reply

Your email address will not be published. Required fields are marked *