ದಕ್ಷಿಣ ಕನ್ನಡ ಕಾಂಗ್ರೇಸ್‍ನ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ರಮಾನಾಥ ರೈ ನೇಮಕ: ಡಿಕೆಶಿ ಆದೇಶ

ಕೆಪಿಸಿಸಿ ಉಪಾಧ್ಯಕ್ಷ ರಾಗಿರುವ ಮಾಜಿ ಸಚಿವ ರಮಾನಾಥ ರೈಯನ್ನು ದಕ್ಷಿಣ ಕನ್ನಡ ಕಾಂಗ್ರೇಸ್‍ನ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ನೇಮಕಗೊಳಿಸಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ಸದರಿ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಗಳನ್ನು ಯಶಸ್ವಿಗೊಳಿಸಲು ಎಲ್ಲಾ ರೀತಿಯಲ್ಲಿ ಸಹಕಾರ ನೀಡಲು ಕೋರುತ್ತೇನೆ ಎಂದು ಡಿಕೆಶಿ ಆದೇಶ ಹೊರಡಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *