ಮಂಗಳೂರು : ನಾಟೆಕಲ್ ರಸ್ತೆ ಅಪಘಾತ : ಯುವಕ-ಯುವತಿ ಸಾವು.

ಮಂಗಳೂರು : ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಮದ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡಿದ್ದು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ವರದಿಯಾಗಿದೆ.

ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ಸಾವನ್ನಪ್ಪಿದವರು. ದೀಕ್ಷಿತ್ ನಿಂದ ನಿಧಿ ವಿಚ್ಛೇದನ ಪಡೆದಿದ್ದರು ಎಂದು ತಿಳಿದುಬಂದಿದೆ. ಬೈಕ್ ಚಲಾಯಿಸುತ್ತಿದ್ದ ಯತೀಶ್ ದೇವಾಡಿಗ ಗಂಭೀರ ಸ್ಥಿತಿಯಲ್ಲಿದ್ದು ಇದೀಗ ಮೃತಪಟ್ಟಿದ್ದಾರೆ .ಅತೀವೇಗದಿಂದ ಬೈಕ್ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಅಪಘಾತ ಸಂಭವಿಸಿದೆ. ನಿಧಿ ಸಾವನ್ನಪ್ಪಿದ್ದು ಯತೀಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ . ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿಧಿಗೆ ಇಬ್ಬರು ಮಕ್ಕಳಿದ್ದು ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು,ತನಿಖೆ ನಡೆಯುತ್ತಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?