ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ:ಪುತ್ತೂರು, ಕಡಬದಲ್ಲಿ ಪ್ರಥಮ ದಿನದ ಪರೀಕ್ಷೆಗೆ 42 ವಿದ್ಯಾರ್ಥಿಗಳು ಗೈರು.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ:ಪುತ್ತೂರು, ಕಡಬದಲ್ಲಿ ಪ್ರಥಮ ದಿನದ ಪರೀಕ್ಷೆಗೆ 42 ವಿದ್ಯಾರ್ಥಿಗಳು ಗೈರು.

ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.

ಪ್ರಥಮ ದಿನವಾದ ಮಾ.25ರಂದು ಪ್ರಥಮ ಭಾಷಾ ಪರೀಕ್ಷೆ ನಡೆದಿದೆ. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ತೆರೆಯಲಾಗಿರುವ 13 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿರುತ್ತದೆ. ಈ ಪೈಕಿ ಕೊಂಬೆಟ್ಟು ಸ.ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ-3, ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲೆ-1, ಉಪ್ಪಿನಂಗಡಿ ಸ.ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗ-5, ಸಂತ ವಿಕ್ಟರಣ ಬಾಲಿಕ ಪ್ರೌಢಶಾಲೆ-1, ಕಡಬ ಸರಕಾರಿ ಪ್ರೌಢಶಾಲೆ-3, ನೆಲ್ಯಾಡಿ ಸೈಂಟ್ ಜಾರ್ಜ್ ಪ್ರೌಢಶಾಲೆ-1, ರಾಮಕುಂಜದ ಶ್ರೀರಾಮಕುಂಜೇಶ್ವರ ಪ್ರೌಢಶಾಲೆ-2, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ-6, ಸವಣೂರು ವಿದ್ಯಾರಶ್ಮಿ ಪ್ರೌಢಶಾಲೆ-6, ಈಶ್ವರಮಂಗಲ ಗಜಾನನ ಪ್ರೌಢಶಾಲೆ-7 ಹಾಗೂ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪರೀಕ್ಷಾ ಕೇಂದ್ರದಲ್ಲಿ 6 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಗೈರಾಗಿರುವ ಒಟ್ಟು ವಿದ್ಯಾರ್ಥಿಗಳಲ್ಲಿ 28 ಮಂದಿ ಹೊಸದಾಗಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಹಾಗೂ 14 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?