ನದಿಯಲ್ಲಿ ಮುಳುಗಿ ಯುವಕ ಮೃತ್ಯು

ನದಿಯಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ಮಾ.24ರಂದು ನಡೆದಿದೆ.

ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ನೀರು ತುಂಬಿಕೊಂಡಿದ್ದು, ನದಿಯ ಆಳ ತಿಳಿಯದೇ ನದಿಗೆ ಇಳಿದಿದ್ದ ಇವರು ನೀರಿನಲ್ಲಿ ಮುಳುಗಿದರು. ಆಗ ಅವರೊಂದಿಗಿದ್ದವರು ಬೊಬ್ಬೆ ಹಾಕಿದ್ದು, ಅಕ್ಕಪಕ್ಕದಲ್ಲಿದ್ದವರು ಓಡಿ ಬಂದು ಹಗ್ಗದ ಸಹಾಯದಿಂದ ನದಿ ನೀರಿಗಿಳಿದು ಇವರನ್ನು ಮೇಲೆತ್ತಿ ತಂದು ಪ್ರಥಮ ಚಿಕಿತ್ಸೆಯ ಬಳಿಕ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *