ಕೋಲಾರ ಲೋಕಸಭಾ ಕ್ಷೇತ್ರ: ಕೆ.ವಿ‌.ಗೌತಮ್ ಕಾಂಗ್ರೆಸ್ ಅಭ್ಯರ್ಥಿ

ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಅಂತಿಮಗೊಳಿಸಿದ್ದು, ಕೆ.ವಿ.ಗೌತಮ್ ಅವರ ಹೆಸರನ್ನು ಘೋಷಿಸಿದೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಸಚಿವ ಕೆಎಚ್‌ ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ನಡುವಿನ ಜಗಳ ತಾರಕಕ್ಕೇರಿದ್ದು, ಅಭ್ಯರ್ಥಿ ಆಯ್ಕೆ ಸದ್ಯ ಹೈಕಮಾಂಡ್ ಅಂಗಳಕ್ಕೆ ತಲುಪಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ಕೂ ನಡೆದಿತ್ತು.

ಕಾಂಗ್ರೆಸ್​​ ಪರಿಶಿಷ್ಟ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯ್​ ಕುಮಾರ್​ ಅವರ ಪುತ್ರ ಕೆ.ವಿ. (K Goudtam) ಅವರಿಗೆ ನೀಡಿದೆ.

ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ, ಎಸ್‌ಸಿ ಮೀಸಲು ಕ್ಷೇತ್ರವಾಗಿರುವ ಕೋಲಾರದಲ್ಲಿ ಅಭ್ಯರ್ಥಿಯಾಗಿ ಕೆವಿ ಗೌತಮ್‌ ಅವರ ಹೆಸರನ್ನು ಒಪ್ಪಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ನ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನ ಮಲ್ಲೇಶ್‌ ಬಾಬು ಕಣಕ್ಕಿಳಿದಿದ್ದಾರೆ.

This image has an empty alt attribute; its file name is WhatsApp-Image-2024-03-30-at-12.11.10-PM-jpeg.png

ಟಿಕೆಟ್‌ ಆಯ್ಕೆಯ ಕಗ್ಗಂಟಿನ ನಡುವೆ ಬೆಂಗಳೂರು ಕೇಂದ್ರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಾಗಿರುವ ಕೆವಿ ಗೌತಮ್‌ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಕೋಲಾರದಲ್ಲಿ ಪ್ರಾತಿನಿಧ್ಯಕ್ಕಾಗಿ ರಮೇಶ್‌ ಕುಮಾರ್‌ ಹಾಗೂ ಮುನಿಯಪ್ಪ ಅವರ ತಿಕ್ಕಾಟದ ನಡುವೆ ಎರಡೂ ಬಣಗಳಿಗೆ ಒಪ್ಪಿಗೆಯಾಗಬಲ್ಲ ಮೂರು ಹೆಸರನ್ನು ಶಿಫಾರಸು ಮಾಡಲಾಗಿತ್ತು. ಅದರಲ್ಲಿ ಕೆವಿ ಗೌತಮ್‌ ಅವರ ಹೆಸರೇ ಪ್ರಮುಖವಾಗಿತ್ತು. ಕೊನೆಗೆ ಇದೇ ಹೆಸರನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮ ಮಾಡಿದೆ.

News Editor

Learn More →

Leave a Reply

Your email address will not be published. Required fields are marked *