ಕಾಪು: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ…!!

ಉಡುಪಿ: ಮಾರ್ಚ್ : 30: ಪ್ರೈಮ್ ಟಿವಿ ನ್ಯೂಸ್ : ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಮುಂಜಾನೆ ನಡೆದಿದೆ.

ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬ್ಬಂದಿ. ಜ್ಯೋತಿ ಅವರು, ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದರು. ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ.

ಮೃತ ಜ್ಯೋತಿಯವರ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು, ಅವರು ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದರು. ಈ ವೇಳೆ ಪತ್ನಿ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಕೂಡಲೇ ಅವರು ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?