ಬ್ರಹ್ಮಾವರ: ರಿಕ್ಷಾ ಚಾಲಕನ ಸಾವಿನ ಸುತ್ತ ಅನುಮಾನದ ಹುತ್ತ

ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ.

ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ‌ ಮನೆಗೆ ಬಾರದೆ, ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಅವರ ಶವ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ಸುವರ್ಣ ನದಿಯಲ್ಲಿ ಪತ್ತೆಯಾಗಿದೆ. ಫೈಜಲ್‌ ಅವರು ಸುವರ್ಣ ನದಿಯ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದು, ಅವರ ಸಾವಿನಲ್ಲಿ ಸಂಶಯವಿದೆ ಎಂದು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?