ಇರಾ ಗ್ರಾಮದ ಅಕ್ರಮ ಮರಳು ದಿಣ್ಣೆಗೆ ದಾಳಿ ಇಬ್ಬರ ವಿರುದ್ದ ಪ್ರಕರಣ ದಾಖಲು.

ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಕಂಚಿನಡ್ಕ ಹಾಗೂ ತಿರುವಾಲೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಶನಿವಾರ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ಸಂಗ್ರಹವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರು ಕಂಚಿನಡ್ಕದಲ್ಲಿ ದಾಳಿ ನಡೆಸಿ 15 ಸಾವಿರ ರೂಪಾಯಿ ಮೌಲ್ಯದ 9 ಯೂನಿಟ್ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಲ್ಲಿನ ಮರಳು ದಿಣ್ಣೆಯ ಆರೋಪಿಗಳಾದ ಚರಣ್ ಹಾಗೂ ಹೈದರ್ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ.

ಇರಾ ಗ್ರಾಮದ ತಿರುವಾಲೆ ಎಂಬಲ್ಲಿ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಸೈ ಹರೀಶ್ ಎಂ ಆರ್ ಅವರು ಅಲ್ಲಿನ ಮನೆಯೊಂದರ ಹಿಂಭಾಗದಲ್ಲಿ ಸಂಗ್ರಹಿಸಿದ್ದ ಸುಮಾರು 10 ಸಾವಿರ ರೂಪಾಯಿ ಮೌಲ್ಯದ 6 ಯೂನಿಟ್ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಲ್ಲಿನ ಮರಳು ಸಂಗ್ರಾಹಕ ಚರಣ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *