ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಮೈಸೂರು ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ವಿಶ್ವ ಹಿಂದೂ ಪರಿಷದ್‌ನ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಖಂಡನೆ.

ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು
ಮೈಸೂರು ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿದ ಬಗ್ಗೆ ವಿಶ್ವ ಹಿಂದೂ ಪರಿಷದ್‌ನ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಖಂಡನೆ.

ಪುತ್ತೂರು: ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು
ಮೈಸೂರು ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿರುವುದನ್ನು ವಿಶ್ವ ಹಿಂದೂ ಪರಿಷದು -ಬಜರಂಗ ದಳ ತೀವ್ರವಾಗಿ ಖಂಡಿಸಿದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕೇವಲ ಹಿಂದೂ ಕಾರ್ಯಕರ್ತರನ್ನು ಮಾತ್ರ ಗುರಿಯಾಗಿರಿಸಿಕೊಂಡು ಅವರನ್ನು ಗಡಿಪಾರು ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದೆ.

ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಕೂಡಾ ಗುರಿಯಾಗಿರಿಸಿಕೊಂಡು ಅವರಿಗೆ ನೋಟೀಸ್ ಹೊರಡಿಸಲಾಗಿದೆ. ರಾಜ್ಯ ಸರಕಾರ ಅವರನ್ನು
ಮೈಸೂರು ಜಿಲ್ಲೆಗೆ ಗಡಿಪಾರು ಮಾಡಲು ಸಂಚು ಹೂಡಿದೆ ಎಂದು ವಿಶ್ವ ಹಿಂದೂ ಪರಿಷದ್‌ನ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲಲ್ಲಿ ಬಾಂಬ್‌ಗಳನ್ನಿಟ್ಟು ಸ್ಫೋಟಿಸುವ ಭಯೋತ್ಪಾದಕರನ್ನು `ಬ್ರದರ‍್ಸ್’ ಎಂದು ಕರೆದುಕೊಳ್ಳುವ ಮನಃಸ್ಥಿತಿಯ ಕಾಂಗ್ರೆಸ್ ನಾಯಕರು ದೇಶಭಕ್ತ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗಡಿಪಾರು ಮಾಡುವಂತಹ ಕೆಲಸಕ್ಕೆ ಕೈ ಹಾಕಿದ್ದಾರೆ. ರಾಜ್ಯ ಸರಕಾರದ ಇಂತಹ ಹಿಂದೂ ವಿರೋಧಿ ಧೋರಣೆಯನ್ನು ವಿಶ್ವ ಹಿಂದೂ ಪರಿಷದ್-ಬಜರಂಗ ದಳ ಉಗ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲದೆ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಸಮಸ್ತ ಹಿಂದೂಗಳು ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠವನ್ನು ಕಲಿಸಲಿದ್ದಾರೆ. ಹಿಂದೂಗಳನ್ನೇ ಗುರಿಯಾಗಿರಿಸಿ ಗಡಿಪಾರು ಮಾಡುವಂತಹ ಸರಕಾರದ ಹೀನ ಮನಃಸ್ಥಿತಿ ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?