ಜೆಡಿಎಸ್ 9 ಸದಸ್ಯರು ಕಾಂಗ್ರೆಸ್ ಸೇರ್ಪಡೆ.

ರಾಮನಗರ: ಚನ್ನಪಟ್ಟಣದಲ್ಲಿ ರಾತ್ರೋರಾತ್ರಿ ಭರ್ಜರಿ ಆಪರೇಷನ್ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಬಿಗ್ ಶಾಕ್ ಕೊಟ್ಟಿದ್ದಾರೆ.

ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಜೆಡಿಎಸ್ (JDS) ಪಕ್ಷದಿಂದ ಆಯ್ಕೆಯಾದ ನಗರಸಭೆ ಅಧ್ಯಕ್ಷ ಸೇರಿದಂತೆ 9 ಮಂದಿ ಸದಸ್ಯರು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ತಡರಾತ್ರಿ ಕಾಂಗ್ರೆಸ್ (Congress) ಸೇರ್ಪಡೆಗೊಂಡಿದ್ದಾರೆ. ಚನ್ನಪಟ್ಟಣ ನಗರಸಭೆಯ ಅಧ್ಯಕ್ಷ ಪ್ರಶಾಂತ್, ಸದಸ್ಯರಾದ ರೇವಣ್ಣ, ಸತೀಶ್ ಬಾಬು, ಶ್ರೀನಿವಾಸಮೂರ್ತಿ, ಲೋಕೇಶ್, ನಾಗೇಶ್, ಸೈಯದ್ ರಫೀಕ್, ಅಭಿದಾಭಾನು, ಭಾನುಪ್ರಿಯಾ ಸೇರಿದಂತೆ ಪಕ್ಷೇತರ ಸದಸ್ಯೆಯಾದ ಉಮಾ ಎಂಬವರು ಬೆಂಗಳೂರಿನ ಡಿಸಿಎಂ ನಿವಾಸದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಾರೆ.

ಚನ್ನಪಟ್ಟಣ ನಗರಸಭೆಯ ಒಟ್ಟು ಜೆಡಿಎಸ್ ಸದಸ್ಯರ ಪೈಕಿ ಮೂರನೇ ಒಂದರಷ್ಟು ಮಂದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ತಮ್ಮನ್ನು ಕಾಂಗ್ರೆಸ್ ಸದಸ್ಯರೆಂದು ಪರಿಗಣಿಸಿ ನಗರಸಭೆಯಲ್ಲಿ ತಮಗೆ ಕಾಂಗ್ರೆಸ್ ಸದಸ್ಯರ ಜೊತೆ ಕೂರಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಮೂಲಕ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕರೆಸಿ ಶಕ್ತಿ ಪ್ರದರ್ಶನ ಮಾಡಿದ್ದ ಮೈತ್ರಿ ನಾಯಕರಿಗೆ ಡಿಕೆ ಬ್ರದರ್ಸ್ ಶಾಕ್ ಕೊಟ್ಟಿದ್ದಾರೆ. ಹೆಚ್‍ಡಿಕೆ ಮಂಡ್ಯ ಲೋಕಸಭಾ ಅಖಾಡಕ್ಕೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಚನ್ನಪಟ್ಟಣದಲ್ಲಿ ಜೆಡಿಎಸ್ ಸದಸ್ಯರನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!