ಕರಾವಳಿ ಭಾಗದ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್​ ಪಾಯಿಸನ್​ನ ಹಲವು ಪ್ರಕರಣಗಳು ದೃಢಪಡುತ್ತಿವೆ.

ಮಂಗಳೂರಿನ ಮತ್ತು ಕರಾವಳಿ ಭಾಗದ ಇತರ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್​ ಪಾಯಿಸನ್​ನ ಹಲವು ಪ್ರಕರಣಗಳು ದೃಢಪಡುತ್ತಿವೆ. ದಿನಕ್ಕೆ ಐದಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ವೈದ್ಯರಿಂದ ಮಾಹಿತಿ ದೊರೆತಿದ್ದು ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100 ಮಂದಿ ಫುಡ್​ ಪಾಯಿಸನ್ ಅಥವಾ ವಿಷಾಹಾರ ಸಮಸ್ಯೆಯಿಂದ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆಂದು ತಿಳಿದಿದೆ.ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆಹಾರದಲ್ಲಿರುವ ಕಲ್ಮಶ,ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳು ದಿನನಿತ್ಯ ಸೇವಿಸುವ ಆಹಾರ ವಿಷವಾಗಿ ಪರಿಣಮಿಸುತ್ತಿದ್ದುಹಾಗೂ ಕಲುಷಿತ ನೀರು ಸೇವನೆಯೇ ಮುಖ್ಯ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಬೀದಿಬದಿ ಆಹಾರ,ಸ್ಟೋರೇಜ್ ಮಾಡಿದ ತಿನಿಸುಗಳು,ಅವಧಿ ಮೀರಿದ ಅಥವಾ ಬೇಯಿಸದ ಆಹಾರದ ಬಳಕೆ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ದೀರ್ಘಾವಧಿಯ ಆಹಾರ ಸಂಗ್ರಹಣೆ, ಹಾಳಾದ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದು ಮತ್ತು ಹೆಚ್ಚು ಸಂಸ್ಕರಿಸಿದ ಆಹಾರಗಳ ಸೇವನೆಯೂ ವಿಷಾಹಾರಕ್ಕೆ ಕಾರಣವಾಗತ್ತವೆ ಎಂದು ವೈದ್ಯರು ತಿಳಿಸಿದ್ದಾರೆ.

ದಿನನಿತ್ಯ ಮನೆ ಊಟ,ಬಿಸಿಯಾದ ನೀರು ,ಲವಂಗದಲ್ಲಿ ಬೇಯಿಸಿದ ನೀರು ,ಜೀರಿಗೆಯಲ್ಲಿ ಬೇಯಿಸಿದ ನೀರು ಹಾಗೂ ನಾಟಿ ಮದ್ದು ಸೇವನೆ ಮಾಡುವುದರಿಂದ ಜೇನುತುಪ್ಪವು ಆ್ಯಂಟಿಫಂಗಲ್ ಏಜೆಂಟ್ಆಗಿರುವುದರಿಂದ ವಿಷಾಹಾರದ ತೀವ್ರತೆಯನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!