ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾ ಕಳವು ಪ್ರಕರಣ; ಆರೋಪಿ ಕೊಂಡಾಣ ನಿವಾಸಿ ಶುಭಾಶ್ ಚಂದ್ರ  ಅರೆಸ್ಟ್.

ತಾಲೂಕಿನ ಕೋಟೆಕಾರು ಗ್ರಾಮದ ಕೊಂಡಾಣ ಕ್ಷೇತ್ರದ ಭಂಡಾರ ಮನೆಗೆ ಅಳವಡಿಸಲಾಗಿದ್ದ 6 ಸಿಸಿ ಕ್ಯಾಮೆರಾಗಳು ಕಳವಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೀರಿ ಕೊಂಡಾಣ ನಿವಾಸಿ ಶುಭಾಶ್ ಚಂದ್ರ ಬಂಧಿತ ಆರೋಪಿ. ಹಾಗೂ ಕಳವಾಗಿದ್ದ ಆರು ಸಿಸಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಂಡಾರ ಮನೆ ಧ್ವಂಸಗೊಳಿಸಿದ್ದ ಪ್ರಕರಣ ನಡೆದ ಬೆನ್ನಲ್ಲೇ ಕ್ಷೇತ್ರಕ್ಕೆ ಅಳವಡಿಸಲಾಗಿದ್ದ ಆರು ಸಿಸಿ ಕ್ಯಾಮೆರಾಗಳು ಕಳವಾಗಿತ್ತು. ಇನ್ನು ಕ್ಯಾಮೆರಾಗಳು ಕಳವಾಗಿರುವುದು ಗುರುವಾರ ಬೆಳಕಿಗೆ ಬಂಧಿತ್ತು. ಈ ಬಗ್ಗೆ ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ಅವರು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಳಿಕ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಕೊಂಡಾಣ ಕ್ಷೇತ್ರದ ಕಚೇರಿಯಲ್ಲಿದ್ದ ಸಿಸಿ ಕ್ಯಾಮೆರಾದ ಡಿವಿಆರ್ ನಲ್ಲಿ ಸೆರೆಯಾಗಿದ್ದ ಆರೋಪಿಯ ಚಹರೆ ಆಧರಿಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬಂಧಿತ ಆರೋಪಿಯು ಮಾನಸಿಕ ರೋಗಿಯಾಗಿದ್ದಾನೆ. ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!