ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ.

ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೋಟೆಲ್‌ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಭೋಪಾಲ್ ಎಂಬಾತನು ಒಂಭತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಈ ಬಗ್ಗೆ ಮಂಗಳೂರು ಮೂಲದ ಹೋಟೆಲ್ ಮಾಲೀಕ ದೀಕ್ಷಿತ್ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
ಕಾರ್ಮಿಕ ಭವನದಲ್ಲಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರಿಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಈ ಬಗ್ಗೆ ತನಿಖೆ ಮುಂದುವರಿದಿದೆ.

News Editor

Learn More →

Leave a Reply

Your email address will not be published. Required fields are marked *