ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್‌ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. 

ಉಳ್ಳಾಲ : ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್‌ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. 

ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ ಪುರುಷೋತ್ತಮ ದ.ಕ. ಲೋಕಸಭಾ ಕ್ಷೇತ್ರದ ಸಂಚಾರಿ ತಂಡದಲ್ಲಿ (ಫೈಯಿಂಗ್ ಸ್ಕ್ಯಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಏಪ್ರಿಲ್. 5ರಂದು ಮಧ್ಯಾಹ್ನದವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮಧ್ಯಾಹ್ನ ವೇಳೆಗೆ ಅಪರಿಚಿತನೊಬ್ಬನಿಂದ ಅವರಿಗೆ ವಾಟ್ಸ್‌ಆ್ಯಪ್ ಕರೆಯೊಂದು ಬಂದಿದೆ.

ಅತ್ತಕಡೆಯಿಂದ ಮಾತನಾಡುತ್ತಿದ್ದ ವ್ಯಕ್ತಿ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ. ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಫೋನ್ ಕೊಟ್ಟಿದ್ದಾನೆ. ಆತ ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಸರಿ ಮಾಡುವುದಾದರೆ ಮಾಡುವ ಎಂದು ಹೇಳಿ ಮೊದಲು ಮಾತನಾಡಿದ್ದ ವ್ಯಕ್ತಿಗೆ ಫೋನ್ ಕೊಟ್ಟಿದ್ದ. ಅಲ್ಲದೇ 80 ಸಾವಿರ ರೂ.ವನ್ನು ಫೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು ಎನ್ನಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!