ಚುನಾವಣೆಗೂ ಮುನ್ನ ಸೋಲೊಪ್ಪಿದರೇ ಸಿದ್ದರಾಮಯ್ಯ? ‘ಇಂಡಿಯಾ’ ಮೈತ್ರಿಕೂಟಕ್ಕೆ ಬಹುಮತ ಅನುಮಾನವೆಂದ ಸಿಎಂ


ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಬಹುಮತ ದೊರೆಯುವುದು ಅನುಮಾನ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಆ ಕುರಿತ ವಿವರ ಇಲ್ಲಿದೆ.
ಬೆಂಗಳೂರು, ಏಪ್ರಿಲ್ 13: ಲೋಕಸಭೆ ಚುನಾವಣೆಗೂ (Lok Sabha Election) ಮುನ್ನವೇ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಸೋಲೊಪ್ಪಿಕೊಂಡರೇ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ. ಇದಕ್ಕೆ ಕಾರಣ ಅವರು ನೀಡಿರುವ ಮಹತ್ವದ ಹೇಳಿಕೆ. ‘ಇಂಡಿಯಾ’ ಮೈತ್ರಿಕೂಟಕ್ಕೆ (INDIA Alliance) ಲೋಕಸಭೆ ಚುನಾವಣೆಯಲ್ಲಿ ಬಹುಮತ ಸಿಗದೇ ಇರಬಹುದು ಎಂದು ಅವರು ‘ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಇಂಡಿಯಾ’ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತವನ್ನು ಪಡೆಯದಿರಬಹುದು. ಆದರೆ ಅದೇ ಎನ್​ಡಿಎ ಮೈತ್ರಿಕೂಡ ಕೂಡ ಸಂಪೂರ್ಣ ಬಹುಮತವನ್ನು ಪಡೆಯುವುದಿಲ್ಲ. ಆದ್ದರಿಂದ, ‘ಇಂಡಿಯಾ’ (ಬಣ) ಮೈತ್ರಿಕೂಟವು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಒಡಿಶಾದ ಸಿಎಂ ನವೀನ್ ಪಟ್ನಾಯಕ್, ಸಿಪಿಐ (ಎಂ) ಮತ್ತು ಇತರ ರಾಜಕೀಯ ಪಕ್ಷಗಳನ್ನು ಅವಲಂಬಿಸಬೇಕಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎನ್‌ಡಿಎ ಹೆಸರಿನಲ್ಲಿ ಬಿಜೆಪಿ ಕೂಡ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಬಿಜೆಪಿಯೊಂದೇ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ. ಬಿಜೆಪಿ ತನ್ನ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಿರಬಹುದು, ಆದರೆ ಅದರ ಅರ್ಥ ಬಿಜೆಪಿ ತಾನಾಗಿ ಅಧಿಕಾರಕ್ಕೆ ಬಂದಿದೆ ಎಂದಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂದರ್ಶನದ ವಿಡಿಯೋ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಿದ್ದರಾಮಯ್ಯ ಅವರಿಂದ ಈ ಹೇಳಿಕೆ ಮೂಡಿಬಂದಿದೆ. ಲೋಕಸಭೆಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26ರಂದು 14 ಕ್ಷೇತ್ರಗಳಿಗೆ ಮತ್ತು ಮೇ 7ರಂದು ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಸಿಎಂ ಬದಲಾವಣೆ ಬಗ್ಗೆ ಏನಂದರು ಸಿದ್ದರಾಮಯ್ಯ?

ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳ ನಂತರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಬಿಟ್ಟುಕೊಡಬೇಕೇ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದರು. ಅದೆಲ್ಲಾ ಹೈಕಮಾಂಡ್ ನಿರ್ಧಾರವನ್ನು ಅವಲಂಬಿಸಿರುತ್ತದೆ. ಹೈಕಮಾಂಡ್‌ ನಿರ್ಧರಿಸಿದರೆ ನಾನೇ ಮುಂದುವರಿಯುತ್ತೇನೆ. ಇಲ್ಲವಾದಲ್ಲಿ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ನಾಲ್ಕು ವರ್ಷಗಳ ನಂತರ ಚುನಾವಣಾ ರಾಜಕೀಯದಲ್ಲಿ ಉಳಿಯುವುದಿಲ್ಲ. ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪುನರುಚ್ಚರಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?