ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳೂರು: ಇಂದು ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ ‌

ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಂಗಳೂರು ಮಹಾನಗರದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿಯವರಿಂದ ಇತಿಹಾಸ ನಿರ್ಮಿಸಿದ ಬೃಹತ್ ರೋಡ್ ಶೋ..

ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ‌ ಆಗಮಿಸಿದ ಪ್ರಧಾನಿ ಅವರು, ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರೋಡ್ ಶೋ ಆರಂಭವಾಯಿತು.

ಲಾಲ್ ಭಾಗ್, ಬಲ್ಲಾಳ್ ಭಾಗ್, ಪಿವಿಎಸ್ ಮೂಲಕ ರೋಡ್ ಶೋ ಬಂದು ನವಭಾರತ ವೃತ್ತದಲ್ಲಿ ರೋಡ್ ಶೋ ಸಮಾಪ್ತಿಯಾಗುತ್ತಿದೆ. ಬಳಿಕ ಇಲ್ಲಿಂದ ಪ್ರಧಾನಿ ಮೋದಿಯವರು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ವಿಶೇಷ ವಿಮಾನದ ಮೂಲಕ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *