ಬಂಟ್ವಾಳ: ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿತ-ಗಂಭೀರ ಆಸ್ಪತ್ರೆಗೆ ದಾಖಲು

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಚೂರಿ ಇರಿತವಾಗಿದೆ.

ಜಕ್ರಿಬೆಟ್ಟು ಎಂಬಲ್ಲಿ ಘಟನೆ ನಡೆದಿದ್ದು,ಚೂರಿ ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.
ರಿಕ್ಷಾದಲ್ಲಿ ಜೊತೆಯಾಗಿ ತೆರಳುತ್ತಿದ್ದಾಗಲೇ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ.
ಸ್ನೇಹಿತ ರವಿ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.
ಆರೋಪಿ ರವಿ ಚೂರಿಯಿಂದ ಇರಿದು ಮತ್ತೆ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಬೇಟಿ ನೀಡಿದ್ದು ,ಪ್ರಕರಣ ದಾಖಲಿಸಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *