ಉಳ್ಳಾಲದ ರಾಜೇಶ್ ಕೋಟ್ಯಾನ್ ಕೊಲೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ.

ಮಂಗಳೂರು: ಉಳ್ಳಾಲ ಕೋಟೆಪುರದಲ್ಲಿ 2016ರ ಎ. 12ರ ಮುಂಜಾನೆ ನಡೆದಿದ್ದ ರಾಜೇಶ್‌ ಕೋಟ್ಯಾನ್‌ ಆಲಿಯಾಸ್‌ ರಾಜ (44) ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಾಧಿ ಶಿಕ್ಷೆ ನೀಡಲಾಗಿದೆ. ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌.ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಉಳ್ಳಾಲ ಕೋಡಿ ರೋಡ್‌ನ‌ ಮೊಹಮ್ಮದ್‌ ಆಸೀಫ್ ಆಲಿಯಾಸ್‌ ಆಚಿ (31), ಮುಕ್ಕಚೇರಿಯ ಮೊಹಮ್ಮದ್‌ ಸುಹೈಲ್‌ ಆಲಿಯಾಸ್‌ ಸುಹೈಲ್‌ (28), ಕೋಡಿ ಮಸೀದಿ ಬಳಿಯ ಅಬ್ದುಲ್‌ ಮುತಾಲಿಪ್‌ ಆಲಿಯಾಸ್‌ ಮುತ್ತು (28) ಮತ್ತು ಉಳ್ಳಾಲ ಉಳಿಯ ರಸ್ತೆಯ ಅಬ್ದುಲ್‌ ಅಸ್ವೀರ್‌ ಆಲಿಯಾಸ್‌ ಅಚ್ಚು (27) ಜೀವಾವಧಿ ಶಿಕ್ಷೆಗೊಳಗಾದವರು.

ಈ ಪ್ರಕರಣದಲ್ಲಿ ಇತರ ಇಬ್ಬರು ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದು, ಇವರ ವಿಚಾರಣೆ ಬಾಲ ನ್ಯಾಯ ಮಂಡಳಿಯಲ್ಲಿ ಬಾಕಿ ಇದೆ.

News Editor

Learn More →

Leave a Reply

Your email address will not be published. Required fields are marked *