SC/ST ದೌರ್ಜನ್ಯ ಪ್ರಕರಣ :ದೂರು ಪರಿಶೀಲಿಸಿದ ನಂತರವೇ ಪ್ರಕರಣ ದಾಖಲಿಸಲು ಹೈಕೋರ್ಟ್ ನಿರ್ದೇಶನ.

ಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣದಲ್ಲಿ ದೂರನ್ನು ಪರಿಶೀಲಿಸಿದ ನಂತರವೇ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.ಬಾಗಲಕೋಟೆಯ ಶಾಲೆಯೊಂದರ ಮುಖ್ಯ ಶಿಕ್ಷಕ ಶಿವಲಿಂಗಪ್ಪ ಕೆರಕಲಮಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಮಹತ್ವದ ಸೂಚನೆ ನೀಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯ ದುರುಪಯೋಗ ಆಗುತ್ತಿದೆ. ಈ ಕಾಯ್ದೆಯಡಿ ನಕಲಿ ಪ್ರಕರಣಗಳ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ನ್ಯಾಯಪೀಠ, ಈ ನಕಲಿ ಪ್ರಕರಣಗಳ ರಾಶಿಯ ಮಧ್ಯೆ ಅಸಲಿ ಪ್ರಕರಣವನ್ನು ಹುಡುವುದು ಸೂಜಿ ಹುಡುಕಿದಂತಾಗಿದೆ. ಬಹುತೇಕ ಪ್ರಕರಣಗಳು ಹಾಲಿ ಪ್ರಕರಣದಂತೆ ಕಾನೂನಿನ ದುರ್ಬಳಕೆಯಾಗಿವೆ ಎಂದು ಖೇದ ವ್ಯಕ್ತಪಡಿಸಿದೆ. ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸುವ ಅಧಿಕಾರಿ, ಮೊದಲು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಸದ್ರಿ ಈ ಪ್ರಕರಣ ಅಧಿಕಾರಿಗಳ ಕಣ್ಣು ತೆರೆಸುವ ಮಾದರಿ ಪ್ರಕರಣವಾಗಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಶ್ರೀ ಮರಡಿ ಮಲ್ಲೇಶ್ವರ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಶಿವಲಿಂಗಪ್ಪ ಕೆರೆಮಲಮಟ್ಟಿ ಅವರು ಕರ್ತವ್ಯಕ್ಕೆಂದು ತಮ್ಮ ಶಾಲೆಗೆ ಹೋಗುತ್ತಿದ್ದ ವೇಳೆ ಶಿವಲಿಂಗಪ್ಪ ಮತ್ತು ಇತರ ಇಬ್ಬರು ತಮ್ಮನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಸೈಕಲ್ ಚೈನ್‌ನಿಂದ ದಾಳಿ ನಡೆಸಿದ್ದರು ಎಂದು ಚಂದ್ರ ರಾಠೋಡ್ ಪೊಲೀಸರಿಗೆ ದೂರು ನೀಡಿದ್ದರು. ಅವರ ದೂರನ್ನು ದಾಖಲಿಸಿದ ಪೊಲೀಸರು ಭಾರತೀಯ ದಂಡ ಸಂಹಿತೆಯ 323, 342, 504 ಮತ್ತು 506 ಸೆಕ್ಷನ್‌ ಅಡಿಯಲ್ಲಿ ಶಿವಲಿಂಗಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ದೂರುದಾರ ಚಂದ್ರ ರಾಠೋಡ್ ಅವರು ಶಿವಲಿಂಗಪ್ಪ ವಿರುದ್ಧ ವರ್ಷದಲ್ಲಿ ಮೂರು ಬಾರಿ ದೂರು ನೀಡಿದ್ದರು. ಅಲ್ಲದೆ, ರಾಠೋಡ್ ಅವರು ಸಮಾಜ ಕಲ್ಯಾಣ ಇಲಾಖೆಯ ಫಲಾನುಭವಿ ಆಗಿದ್ದು, ಇಲಾಖೆಯಿಂದ 3.5 ಲಕ್ಷ ರೂ. ಅನುದಾನ ಪಡೆದಿದ್ದರು. ನಕಲಿ ಪ್ರಕರಣಗಳಿಗೆ ನೆರವಾಗಲು ಸಾರ್ವಜನಿಕರ ಹಣವನ್ನು ನೀಡಲಾಗಿದೆ ಎಂಬುದು ದಾಖಲೆಗಳ ಮೂಲಕ ಸಾಬೀತಾಗಿದೆ.

ಸರ್ಕಾರದ ಸಹಾಯದಿಂದ ನಕಲಿ ಪ್ರಕರಣಗಳನ್ನು ನಡೆಸಲಾಗುತ್ತಿದೆ ಎಂಬುದನ್ನು ಪರಿಗಣಿಸಿದ ನ್ಯಾಯಪೀಠ, ಆಕ್ಷೇಪಾರ್ಹ ಪ್ರಕ್ರಿಯೆ ನಡೆಸಲು ದೂರುದಾರನಿಗೆ ಸಮಾಜ ಕಲ್ಯಾಣ ಇಲಾಖೆ ನೀಡಿರುವ ಹಣವನ್ನು ದೂರುದಾರ ಚಂದ್ರುರಾಠೋಡ್ ಅವರಿಂದ ವಸೂಲಿ ಮಾಡುವಂತೆ ಇಲಾಖೆಗೆ ಆದೇಶ ನೀಡಿದೆ. ಇಂತಹ ಪ್ರಕರಣಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯದ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ನೈಜ ಪ್ರಕರಣಗಳಿಗೆ ಹಿನ್ನಡೆ ಆಗುತ್ತಿದೆ. ನಕಲಿ ಪ್ರಕರಣಗಳಿಂದ ನೈಜ ಪ್ರಕರಣಗಳು ಕಳೆದುಹೋಗುತ್ತಿವೆ. ಈ ನೆಲೆಯಲ್ಲಿ ಸಹಾಯಧನ ನೀಡುವುದಕ್ಕೂ ಮುನ್ನ ದಾಖಲೆಗಳನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಪರಿಶೀಲಿಸಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?