ಕಾರವಾರ: ನೀರಿಗೆ ಬಿದ್ದ ಚಿಕ್ಕಮಗುವನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 6 ಮಂದಿ ಜಲಸಮಾಧಿ.

ಕಾರವಾರ: ಎಪ್ರಿಲ್ 22: ನೀರಿಗೆ ಬಿದ್ದಿದ್ದ ಚಿಕ್ಕಮಗುವನ್ನು ರಕ್ಷಣೆ ಮಾಡಲು ಹೋಗಿ ಒಂದೇ ಕುಟುಂಬದ ಆರು ಮಂದಿ ಸಾವನಪ್ಪಿದ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಸಂಭವಿಸಿದೆ

ಪ್ರವಾಸಕ್ಕೆ ತೆರಳಿದ್ದ ಇವರು ಕಾಳಿ ನದಿ ಸಮೀಪ ಊಟ ಮಾಡಿ ವಿಶ್ರಾಂತಿ ಪಡೆದಿದ್ದಾರೆ. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ನಜೀರ್ ಅಹ್ಮದ್(40), ಅಲ್ಛೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ‌ ಅಹ್ಮದ್(15), ಅಬೀದ್ ಅಹ್ಮದ್(12) ಮೃತರು.

ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಒಟ್ಟು 8 ಜನರು ಪ್ರವಾಸಕ್ಕೆ ತೆರಳಿದ್ದರು. ಆ ಪೈಕಿ ಇಬ್ಬರು ಮಹಿಳೆಯರು ನೀರಿಗೆ ಇಳಿದಿರಲಿಲ್ಲ ಎನ್ನಲಾಗುತ್ತಿದೆ. ಸದ್ಯ ಕಾಳಿ ನದಿಯಿಂದ ಆರು ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ.

News Editor

Learn More →

Leave a Reply

Your email address will not be published. Required fields are marked *